Bengaluru,ಬೆಂಗಳೂರು, ಮೇ 9 -- ಬೆಂಗಳೂರು: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ ಸೇರಿ 7 ಜಿಲ್ಲೆಗಳಲ್ಲ ಕೆಲವು ಕಡೆ ಮಳೆ ಬೀಳಲಿದೆ. ದಕ್ಷಿಣ ಒಳನಾಡಿನ ಎರಡು ಜಿಲ್ಲೆಗಳನ್ನು ಬಿಟ್ಟು ಎಲ್ಲ ಜಿಲ್ಲೆಗಳಲ್ಲೂ ಸಾಧಾರಣ ಮಳೆ ಬೀಳಲಿದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಬಹುದು ಎಂದು ಹವಾಮಾನ ಮುನ್ಸೂಚನಾ ವರದಿ ಹೇಳಿದೆ.

ವಿವರವಾಗಿ ಹೇಳಬೇಕು ಎಂದರೆ ಭಾರತೀಯ ಹವಾಮಾನ ಇಲಾಖೆಯ ವರದಿ ಪ್ರಕಾರ, ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮಳೆ ಇಲ್ಲ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳ ಕೆಲವು ಕಡೆ ಮಳೆಯಾಗಲಿದೆ.ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗುಡುಗು ಮಿಂಚು ಕೂಡ ಇರಬಹುದು. ಉಳಿದಂತೆ ಯಾದಗಿರಿ, ಹಾವೇರಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಇಂದು ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ...