ಭಾರತ, ಫೆಬ್ರವರಿ 5 -- ಬೆಂಗಳೂರು: ಸಿಟಿ ಟ್ಯಾಕ್ಸಿಗಳು (City Taxi) ಮತ್ತು ಆ್ಯಪ್‌ ಆಧಾರಿತ ಟ್ಯಾಕ್ಸಿಗಳು ಹವಮಾನದ ವ್ಯತ್ಯಾಸ ಮತ್ತು ಜನದಟ್ಟಣೆಗೆ ಅನುಗುಣವಾಗಿ ಪ್ರಯಾಣ ದರ ಏರಿಕೆ, ಇಳಿಕೆ ಮಾಡುತ್ತಿರುವುದನ್ನು ತಪ್ಪಿಸಲು ಏಕರೂಪದ ದರ ನಿಗದಿಪಡಿಸಿ ಸರ್ಕಾರ (Karnataka Government) ಅಧಿಸೂಚನೆ ಹೊರಡಿಸಿದೆ. ಈ ನಿಯಮ ಓಲಾ (Ola), ಉಬರ್‌ (Uber) ಸಹಿತ ಎಲ್ಲ ಟ್ಯಾಕ್ಸಿಗಳಿಗೆ ಅನ್ವಯವಾಗಲಿದೆ.

ಮಳೆ ಬಂದಾಗ ದರ ಹೆಚ್ಚಳ ಮಾಡುವುದು, ಪೀಕ್ ಅವರ್ ಅಥವಾ ಸಾರ್ವಜನಿಕರು ಕಚೇರಿಗೆ, ಕೆಲಸಕ್ಕೆ ತೆರಳುವ ಮತ್ತು ಮರಳುವ ಸಂದರ್ಭದಲ್ಲಿ ದರ ಹೆಚ್ಚಿಸುವುದು ಮತ್ತು ಜನದಟ್ಟಣೆ ಕಡಿಮೆ ಇರುವ ಸಮಯದಲ್ಲಿ ಟ್ಯಾಕ್ಸಿ ಪ್ರಯಾಣ ದರ ಇಳಿಕೆ ಮಾಡಲಾಗುತ್ತಿತ್ತು. ಈ ತಾರತಮ್ಯ ಕುರಿತು ಅನೇಕ ದೂರುಗಳು ಬಂದಿದ್ದವು. ಅದನ್ನು ತಪ್ಪಿಸುವುದಕ್ಕಾಗಿ ಏಕರೂಪ ದರ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: 2025ಕ್ಕೆ ರಸ್ತೆಗಳಿಯಲಿದೆ ಬಜಾಜ್ ಸಿಎನ್‌ಜಿ ದ್ವಿಚಕ್ರ ವಾಹನ

ಇದುವರೆಗೆ ಸಿಟಿ ಟ್ಯಾಕ್ಸಿಗಳ ಪ್ರಯಾಣ ದರ ಮತ್ತು ಅಗ್ರಿಗೇಟರ್‌ ಟ್ಯಾಕ್ಸಿಗಳ ದರ...