Mysuru,Bengaluru,ಮೈಸೂರು,ಬೆಂಗಳೂರು, ಮಾರ್ಚ್ 15 -- ಮೈಸೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಪ್ರತಿಷ್ಠಿತ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಈ ಬಾರಿ ಹೈ ವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಟ್ಟಿದೆ. ಕಳೆದೆರಡು ಬಾರಿ ಗೆಲುವು ಸಾಧಿಸಿದ್ಧ ಸಂಸದ ಪ್ರತಾಪ್ ಸಿಂಹ ಅವರ ಬದಲು ಮಹಾರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.

ಅತಿ ಹೆಚ್ಚು ಒಕ್ಕಲಿಗ ಸಮುದಾಯದ ಮತದಾರರನ್ನು ಒಳಗೊಂಡಿರುವ ಕ್ಷೇತ್ರದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರೇ ಮೂರನೇ ಬಾರಿಯೂ ಮತ್ತೊಮ್ಮೆ ಚುನಾವಣೆ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದರು. ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ 31 ವರ್ಷದ ರಾಜ ಯದುವೀರ್‌ ಒಡೆಯರ್ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದು ಈ ಕ್ಷೇತ್ರದಲ್ಲಿ ಒಡೆಯರ್‌ಗೆ ವರದಾನವಾಗಬಹುದು. 1951ರಿಂದ 17 ಬಾರಿ ಲೋಕಸಭಾ ಚುನಾ...