New Delhi,Bengaluru,ನವದೆಹಲಿ,ಬೆಂಗಳೂರು, ಮಾರ್ಚ್ 14 -- ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಬುಧವಾರ ಬಿಡುಗಡೆ ಮಾಡಿದ್ದು, ಕನಿಷ್ಠ 25 ಹಾಲಿ ಸಂಸದರ ಬದಲಿಗೆ ಹೊಸಬರನ್ನು ಕಣಕ್ಕಿಳಿಸಿದೆ. ಇದಕ್ಕೂ ಮೊದಲು ಬಿಡುಗಡೆ ಮಾಡಿದ್ದ 195 ಅಭ್ಯರ್ಥಿಗಳ ಪಟ್ಟಿಯಲ್ಲಿ 33 ಹೊಸಬರ ಹೆಸರನ್ನು ಬಿಜೆಪಿ ಸೇರಿಸಿತ್ತು.

ಎರಡನೇ ಪಟ್ಟಿಯಲ್ಲಿ ಕೇಂದ್ರಾಡಳಿತ ಪ್ರದೇಶವೂ ಸೇರಿ 11 ರಾಜ್ಯಗಳ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಬಿಜೆಪಿ ಪ್ರಕಟಿಸಿದೆ. ಈ ಪೈಕಿ ದೆಹಲಿ, ಗುಜರಾತ್‌, ಹರಿಯಾಣ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಉತ್ತರಾಖಂಡ, ತ್ರಿಪುರಾಗಳಲ್ಲಿ ಕೆಲವು ಕ್ಷೇತ್ರಗಳಲ್ಲಿ ಹಾಲಿ ಸಂಸದರ ಬದಲು ಹೊಸಬರನ್ನು ಕಣಕ್ಕೆ ಇಳಿಸಲಾಗಿದೆ.

ಇದರೊಂದಿಗೆ ಬಿಜೆಪಿ ಪ್ರಕಟಿಸಿರುವ 267 ಅಭ್ಯರ್ಥಿಗಳ ಪಟ್ಟಿಯಲ್ಲಿ 58 ಹೊಸಬರ ಹೆಸರನ್ನು ಸೇರಿಸಲಾಗಿದೆ. ಇದರಲ್ಲಿ ಅಚ್ಚರಿಯ ಆಯ್ಕೆಯಾಗಿ, ದೆಹಲಿಯ ಮಾಜಿ ಮೇಯರ್ ಹರ್ಷ್‌ ಮಲ್ಹೋತ್ರಾ, ಮೈಸೂರಿನ ರಾಜ ಯದುವೀರ್ ಒಡೆಯರ್, ...