ಭಾರತ, ಮಾರ್ಚ್ 16 -- ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ದೇಶದ ಗಮನ ಸೆಳೆಯುತ್ತಿರುವ ಕ್ಷೇತ್ರಗಳಲ್ಲಿ ಬೆಂಗಳೂರು ಗ್ರಾಮಾಂತರವೂ ಒಂದಾಗಲಿದೆ. ಈ ಕ್ಷೇತ್ರದಲ್ಲಿ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಅಳಿಯ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಅವರು ಬಿಜೆಪಿ ಚಿನ್ಹೆಯ ಮೇಲೆ ಸ್ಪರ್ಧೆ ಮಾಡುತ್ತಿರುವುದು ಮೊದಲ ಕಾರಣ. ಚೊಚ್ಚಲ ಪ್ರಯತ್ನದಲ್ಲೇ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಹೋದರ ಹ್ಯಾಟ್ರಿಕ್ ಹೊಡೆಯಲು ಸಜ್ಜಾಗಿರುವ ಡಿಕೆ ಸುರೇಶ್ ವಿರುದ್ಧ ಸ್ಪರ್ಧೆ ಮಾಡಿದ್ದಾರೆ. ಎರಡೂ ಕುಟುಂಬಗಳಿಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಡಾ. ಮಂಜುನಾಥ್ ಸರಳ ಮತ್ತು ಸಂಭಾವಿತ ವೈದ್ಯ ಎನ್ನುವುದನ್ನು ಎಲ್ಲರೂ ಒಪ್ಪುತ್ತಾರೆ. ಮೊದಲು ಚಿಕಿತ್ಸೆ ನಂತರ ಹಣ ಎಂಬ ಧ್ಯೇಯ ವಾಕ್ಯ ಅವರದ್ದು. ಅವರ ಈ ಒಳ್ಳೆಯತನ ಚುನಾವಣೆಯಲ್ಲಿ ಪ್ರಯೋಜನಕ್ಕೆ ಬರಲಿದೆ ಎಂಬ ನಿರೀಕ್ಷೆಯಿದೆ. ಜೊತೆಗೆ ಪ್ರಧಾನಿ ಮೋದಿ ಅವರ ನಾಮಬಲವೂ ಮಂಜುನಾಥ್ ಅವರ ಕೈ ಹಿಡಿಯುವ ಸಾಧ್ಯತೆಗಳ...