ಭಾರತ, ಏಪ್ರಿಲ್ 30 -- ಬೆಂಗಳೂರು: ಜಲಮಂಡಳಿಯ ಕಾಯ್ದೆಯನ್ನು ಉಲ್ಲಂಘಿಸಿ, ಅನಧಿಕೃತವಾಗಿ ತ್ಯಾಜ್ಯ ನೀರು ಹಾಗೂ ಮಳೆ ನೀರನ್ನು ಒಳಚರಂಡಿಗೆ ಹರಿಸುತ್ತಿರುವವರಿಗೆ ಮೇ 1 ರಿಂದ ನೋಟೀಸ್‌ ಜಾರಿ ಮಾಡಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ಧರಿಸಿದೆ. ಜಲಮಂಡಳಿಯಿಂದ ಸಂಪರ್ಕ ಪಡೆಯದೆ ಅನಧಿಕೃತವಾಗಿ ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಸಲಾಗುತ್ತಿದೆ. ಬಹುತೇಕ ಕಡ ಮಳೆ ನೀರನ್ನೂ ಒಳಚರಂಡಿಗೆ ಹರಿಸಲಾಗುತ್ತಿದೆ. ಇದನ್ನು ತಪ್ಪಿಸಲು ಹಾಗೂ ಒಳಚರಂಡಿ ಸಂಪರ್ಕವನ್ನು ಅಧಿಕೃತಗೊಳಿಸಲು ಮೇ 7 ರವರೆಗೆ ಅವಕಾಶ ನೀಡಲಾಗಿದೆ ಎಂದು ಮಂಡಳಿ ಅಧ್ಯಕ್ಷ ಡಾ. ವಿ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಕಳೆದ ಒಂದು ವಾರದಿಂದ ಜಲಮಂಡಳಿ ಅಧಿಕಾರಿಗಳು 528 ಕಟ್ಟಡಗಳಲ್ಲಿ ಪರಿಶೀಲನೆ ನಡೆಸಿದ್ದು, 446 ಕಟ್ಟಡಗಳಲ್ಲಿ ಅನಧಿಕೃತವಾಗಿ ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಸುತ್ತಿರುವುದು ಪತ್ತೆಯಾಗಿದೆ. ಇದರಲ್ಲಿ 221 ಸಂಪರ್ಕಗಳನ್ನು ಅಗತ್ಯ ಶುಲ್ಕ ಪಾವತಿಸಿಕೊಂಡು ಅಧಿಕೃತಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಉಳಿದ ...