New Delhi,Bengaluru,ಬೆಂಗಳೂರು,ನವದೆಹಲಿ, ಮಾರ್ಚ್ 24 -- ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಏಪ್ರಿಲ್ 1 ರಿಂದ ಪ್ರಾರಂಭವಾಗುವ 2024-25 ರ ಶೈಕ್ಷಣಿಕ ವರ್ಷಕ್ಕೆ 3 ಮತ್ತು 6ನೇ ತರಗತಿಗಳಿಗೆ ಮಾತ್ರ ಹೊಸ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳನ್ನು ಬಿಡುಗಡೆ ಮಾಡಲಿದೆ. ಇತರ ತರಗತಿಗಳ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ತನ್ನ ಸಂಯೋಜಿತ ಶಾಲೆಗಳಿಗೆ ಕಳುಹಿಸಿರುವ ಅಧಿಕೃತ ಸಂವಹನದಲ್ಲಿ ತಿಳಿಸಿದೆ.

ಸಿಬಿಎಸ್ಇ ಜೊತೆಗೆ ಸಂಯೋಜಿತವಾಗಿರುವ ಎಲ್ಲ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಕಳುಹಿಸಲಾದ ಸುತ್ತೋಲೆಯಲ್ಲಿ, 3 ಮತ್ತು 6ನೇ ತರಗತಿಗಳಿಗೆ ಹೊಸ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳನ್ನು ರಚಿಸುವ ಕೆಲಸ ಪ್ರಗತಿಯಲ್ಲಿದೆ. ಅವುಗಳನ್ನು ಶೀಘ್ರದಲ್ಲೆ ಬಿಡುಗಡೆ ಮಾಡಲಾಗುವುದು ಎಂದು ಎನ್‌ಸಿಇಆರ್‌ಟಿ ಮಾರ್ಚ್ 18ಕ್ಕೆ ಅದು ಕಳುಹಿಸಿದ ಪತ್ರದಲ್ಲಿ ತಿಳಿಸಿರುವುದಾಗಿ ಹೇಳಿದೆ. ಅಲ್ಲದೆ, ಈ ವರ್ಷದ...