ಭಾರತ, ಏಪ್ರಿಲ್ 30 -- ನವದೆಹಲಿ: ಲೋಕಸಭಾ ಚುನಾವಣೆ ನಡೆಯುತ್ತಿರುವ ಈ ಹೊತ್ತಿನಲ್ಲಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ಹಗರಣದ ಆರೋಪ ರಾಜಕೀಯ ಸಂಚಲನ ಮೂಡಿಸಿದೆ. ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಗಮನಸೆಳೆದಿದ್ದು, ಮತದಾನಕ್ಕೆ ಎರಡು ದಿನ ಇರುವಾಗ ಬಹಿರಂಗವಾಗಿತ್ತು. ಕರ್ನಾಟಕದಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸುತ್ತಿರುವ ಕಾರಣ, ಈ ಹಗರಣಕ್ಕೆ ಸಂಬಂಧಿಸಿ ಬಿಜೆಪಿಯ ನಿಲುವು ಏನು ಎಂದು ಕಾಂಗ್ರೆಸ್ ನಾಯಕರು ಪದೇ ಪದೇ ಕೇಳುತ್ತ ಬಂದಿದ್ದರು.

ಬಿಜೆಪಿಯ ರಾಜ್ಯ ನಾಯಕರು ಕಾನೂನು ಪ್ರಕಾರ ಕ್ರಮ ನಡೆಯಲಿ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಎಸ್‌ಐಟಿ ರಚನೆಯಾಗಿದೆ. ತನಿಖೆ ಆಗಿ, ತಪ್ಪಿತಸ್ಥರ ವಿರುದ್ಧ ಕ್ರಮವಾಗಲಿ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿವೈ ವಿಜಯೇಂದ್ರ ಅವರೂ ಹೇಳಿದ್ದರು. ಇಷ್ಟಾದರೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬಿಜೆಪಿ ಕೇಂದ್ರ ನಾಯಕರು ಈ ಬಗ್ಗೆ ಸ್ಪಷ್ಟೀಕರಣ ಕೊಡಲಿ, ಬಿಜೆಪಿಯ ನಿಲುವು ಸ್ಪಷ್ಟಪಡಿಸಲಿ ಎಂ...