Hassan, ಮೇ 2 -- ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಜಾಮೀನಿ ಮೊರೆ ಹೋಗಿದ್ದಾರೆ. ಬಂಧನ ಭೀತಿಯ ಕಾರಣದಿಂದ ಎಚ್.‌ಡಿ.ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ರೇವಣ್ಣ ಪರವಾಗಿ ಅವರ ವಕೀಲರು ಸಲ್ಲಿಸಿರುವ ಅರ್ಜಿ ಸಲ್ಲಿಕೆಯಾಗಿದ್ದು. ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ. ಈಗಾಗಲೇ ಹೊಳೆ ನರಸೀಪುರ ಠಾಣೆಯಲ್ಲಿ ದಾಖಲಾಗಿರುವ ದೂರು ಆಧರಿಸಿ ತನಿಖೆ ಶುರುವಾಗಿದ್ದು. ಎಚ್‌.ಡಿ.ರೇವಣ್ಣ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೊಟೀಸ್‌ ಜಾರಿಗೊಳಿಸಲಾಗಿದೆ. ಆದರೆ ರೇವಣ್ಣ ವಿಚಾರಣೆಗೆ ಹಾಜರಾಗಿಲ್ಲ.

Published by HT Digital Content Services with permission from HT Kannada....