Bengaluru, ಮೇ 2 -- ಬೆಂಗಳೂರು: ಲೋಕಸಭೆ ಚುನಾವಣೆಗೆ ಎರಡನೇ ಹಂತದ ಮತದಾನದ ಬಳಿಕ ಮತ ಎಣಿಕೆಯೂ ಮುಗಿಯುತ್ತಿದ್ದಂತೆ ಕರ್ನಾಟಕದಲ್ಲಿ ಮತ್ತೊಂದು ಚುನಾವಣೆ ನಡೆಯಲಿದೆ. ಇನ್ನೂ ಎರಡನೇ ಹಂತದ ಚುನಾವಣೆಗೆ ಐದು ದಿನ ಇರುವಾಗಲೇ ಕರ್ನಾಟಕದಲ್ಲಿ ಶಿಕ್ಷಕರು ಹಾಗೂ ಪದವೀಧರರ ವಿಧಾನಪರಿಷತ್‌ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣೆ ಆಯೋಗವು ಗುರುವಾರ ಘೋಷಿಸಿದೆ. ಕರ್ನಾಟಕದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ 2024ರ ಮೇ 09ರಂದು ಅಧಿಸೂಚನೆ ಹೊರ ಬೀಳಲಿದ್ದು,ಅಂದಿನಿಂದಲೇ ನಾಮಪತ್ರ ಸಲ್ಲಿಕೆಯೂ ಶುರುವಾಗಲಿದೆ. 2024 ರ ಜೂನ್‌ 03ರಂದು ಆರು ವಿಧಾನಪರಿಷತ್‌ ಮತದಾನ ನಡೆಯಲಿದೆ. ಜೂನ್‌ 06ರಂದು ಮತ ಎಣಿಕೆ ನಡೆಯಲಿದೆ.

ಕರ್ನಾಟಕದ ತಲಾ ಮೂರು ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಹಲಿದೆ. ಇದರಲ್ಲಿ ರಾಜ್ಯದ ಕಲಬುರಗಿ ಕೇಂದ್ರಿತ ಈಶಾನ್ಯ ಪದವೀಧರರ ಕ್ಷೇತ್ರ, ಮಂಗಳೂರು ಕೇಂದ್ರಿತ ನೈರುತ್ಯ ಪದವೀಧರರ ಕ್ಷೇತ್ರ, ಬೆಂಗಳೂರು ಪದವೀಧರರ ಕ್ಷೇತ್ರ, ತುಮಕೂರು ಕೇಂದ್ರಿತ ಆಗ್ನೇಯ ಶಿಕ್ಷಕರ ಕ್ಷೇತ...