ಭಾರತ, ಮೇ 27 -- ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೊನೆಯ ಲೀಗ್ ಹಂತದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ಆರ್ಸಿಬಿ ಬ್ಯಾಟರ್ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ ಹೊಸ ಚರಿತ್ರೆ ಸೃಷ್ಟಿಸಿದ್ದಾರೆ.
30 ಎಸೆತಗಳಲ್ಲಿ 10 ಬೌಂಡರಿ ಸಹಿತ 54 ರನ್ ಬಾರಿಸಿದ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ ಡೇವಿಡ್ ವಾರ್ನರ್ ಅವರ ಅರ್ಧಶತಕಗಳ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಇದಕ್ಕೂ ಮುನ್ನ ವಾರ್ನರ್ರ ಸಾರ್ವಕಾಲಿಕ ಅರ್ಧಶತಕಗಳ ದಾಖಲೆ ಸರಿಗಟ್ಟಿದ್ದರು.
ಶ್ರೀಮಂತ ಲೀಗ್ 63ನೇ ಅರ್ಧಶತಕ ಬಾರಿಸಿ ಕೊಹ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದಾರೆ. ಲೀಗ್ನಲ್ಲಿ ಇಷ್ಟು ಅರ್ಧಶತಕ ಬಾರಿಸಿದ ಮೊದಲ ಆಟಗಾರನೂ ಹೌದು. 62 ಅರ್ಧಶತಕ ಬಾರಿಸಿದ್ದ ವಾರ್ನರ್ ದಾಖಲೆ ಸರಿಗಟ್ಟಿದ್ದ ಕೊಹ್ಲಿ, ಇದೀಗ ಮುರಿದು ಹಾಕಿದ್ದಾರೆ.
ಐಪಿಎಲ್ನಲ್ಲಿ ಒಟ್ಟಾರೆ 50 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಹೊರಹೊಮ್ಮಿರುವ ಕೊಹ್ಲಿ 71 ಸಲ 50+ ಸ್ಕೋರ್ (8 ಶತಕಗಳು ಸೇರಿ) ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.